ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24.  ಲೇಡಿಸ್‌ ಪಿಜಿಯೊಂದಕ್ಕೆ ನುಗ್ಗಿದ ದುಷ್ಕರ್ಮಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದು, ಮೃತ ಯುವತಿಯನ್ನು ಬಿಹಾರ ಮೂಲದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದೆ.

ಕೃತಿ ಕುಮಾರಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಸುಮಾರು 11.10ಕ್ಕೆ ಯುವಕನೋರ್ವ ಚಾಕು ಇಟ್ಟುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದು 3ನೇ ಮಹಡಿಯಲ್ಲಿರುವ ಕೃತಿ ಕುಮಾರಿ ಅವರ ಕೊಠಡಿ ಬಳಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಬಳಿಕ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ. ತೀವ್ರ ಗಾಯಗೊಂಡ ಕೃತಿ ಕುಮಾರಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬಳಿಕ ಯುವಕ ಪರಾರಿಯಾಗಿದ್ದಾನೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಯುವಕನ ಪತ್ತೆ ಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group