ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು



(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಲಾರಿಯೊಂದು ಸ್ಕೂಟರ್‌ ಗೆ ಢಿಕ್ಕಿಯಾಗಿ ಸ್ಕೂಟರ್ ಚಲಾಯಿಸುತ್ತಿದ್ದ ವಿಕಲಚೇತನ ವ್ಯಕ್ತಿ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಜಲ್ಪಡ್ಪು ಎಂಬಲ್ಲಿ ಸಂಭವಿಸಿದೆ.





ಮೃತರನ್ನು ಬಂಟ್ವಾಳ ತಾಲೂಕಿನ ಮಿತ್ತೂರು ಏಮಾಜೆ ಶಿವರಾಮ ನಾಯ್ಕ (50) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯು ಮೂರು ಚಕ್ರದ ಸ್ಕೂಟರ್ ಗೆ ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ಶಿವರಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಸಂಚಾರ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top