(ನ್ಯೂಸ್ ಕಡಬ)newskadaba.com. ತುಮಕೂರು, ಜು.24. ಬಿಟ್ ಕಾಯಿನ್ ಕಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಿ ಸೇರಿದಂತೆ ಮೂವರಿಗೆ ತುಮಕೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಆರೋಪಿ ಶ್ರೀಕಿಯೊಂದಿಗೆ ರಮೇಶ್, ರಬೀನ್ ಖಂಡೇಲ್ ವಾಲಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎನ್ನಲಾಗಿದೆ.
ಪ್ರಕರಣದ ಈ ಮೂವರು ಆರೋಪಿಗಳು ಜಾಮೀನು ಕೋರಿ ನಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ಉದ್ಯಮಿಯೊಬ್ಬರಿಗೆ ಆನ್‌ಲೈನ್ ವಂಚಿಸಿದ ಹಿನ್ನೆಲೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿತ್ತು ಎಂದು ವರದಿ ತಿಳಿಸಿದೆ.