‘ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳ ಧರಣಿ’    ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.25. ನನ್ನ ಹೆಸರಿಗೆ ಮಸಿ ಬಳಿಯಲು, ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳು ಮುಡಾ ಹಗರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ವಿಪಕ್ಷಗಳ ಪ್ರತಿಭಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ವಿರುದ್ದ ಕಿಡಿಕಾರಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅವರು ವಿಷಯವೇ ಇಲ್ಲದ್ದನ್ನ ವಿಷಯ ಮಾಡ್ತಿದ್ದಾರೆ. ಸುಮ್ಮನೆ ಮುಡಾ ವಿಷಯ ಇಟ್ಟುಕೊಂಡು ಪ್ರತಿಭಟನೆ ಮಾಡ್ತಿದ್ದಾರೆ. ನಿಯಮಾವಳಿ ಪ್ರಕಾರವೇ ಸೈಟ್ ಪಡೆಯಲಾಗಿದೆ. ಕಾನೂನು ಪ್ರಕಾರವೇ ಎಲ್ಲಾ ಆಗಿದೆ. ಮುಡಾ ಸೈಟ್ ಕೊಟ್ಟಾಗ ಬಿಜೆಪಿಯೇ ಅಧಿಕಾರದಲ್ಲಿ ಇತ್ತು. ಅದರೂ ಈಗ ಪ್ರತಿಭಟನೆ ಮಾಡಿಸ್ತಿದ್ದಾರೆ ಅಂತ ವಿಪಕ್ಷಗಳ ವಿರುದ್ಧ ಕಿಡಿಕಾರಿದರು ಎನ್ನಲಾಗಿದೆ.

Also Read  ಕೆ.ಆರ್.ಸರ್ಕಲ್‌ನ ಅಂಡರ್ ಪಾಸ್‌ ನೀರಿನಲ್ಲಿ ಸಿಲುಕಿ ಯುವತಿ ಮೃತ್ಯು

 

error: Content is protected !!
Scroll to Top