ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು        ಕೆಲ ರೈಲುಗಳ ಮಾರ್ಗ ಬದಲಾವಣೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29. ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆ ಸಂಚಾರ ಬಂದ್ ಆಗುತ್ತಿವೆ. ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ರದ್ದಾಗಿದೆ.

ಭಾರೀ ಭೂಕುಸಿತದಿಂದ ಹಳಿಯ ಮೇಲೆ ಮಣ್ಣು ಬಿದ್ದಿದೆ. ಹಳಿ ದುರಸ್ತಿಪಡಿಸುವ ಕಾರ್ಯ ಮುಂದುವರಿದಿದ್ದು, ಇದರಿಂದ ಕೆಲ ರೈಲುಗಳ ಸಂಚಾರ ಜುಲೈ ೨೯ರವರೆಗೆ ರದ್ದುಗೊಳಿಸಲಾಗಿದೆ. ಜೊತೆಗೆ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈಲು ಹಳಿಯ ಕೆಳಭಾಗದಲ್ಲಿ ಭಾರೀ ಆಳಕ್ಕೆ ಮಣ್ಣು ಜರಿದಿದೆ. ಇದರಿಂದ ಹಳಿಗೆ ಅಪಾಯ ಎದುರಾಗಿದೆ. ರೈಲು ಇಲಾಖೆ ಸಿಬ್ಬಂದಿ ದುರಸ್ತಿ ಕಾರ್ಯ ನಡೆಸುತ್ತಿದ್ದು, ಸುರಿಯುತ್ತಿರುವ ಮಳೆಯು ಕಾರ್ಯಾಚರಣೆಗೆ ಅಡ್ಡಿಯನ್ನುಂಟು ಮಾಡಿದೆ.

Also Read  ಉಪ್ಪಿನಂಗಡಿ: ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್ ➤ ಕಡಬದ ನವವಿವಾಹಿತ ಮೃತ್ಯು

 

 

error: Content is protected !!
Scroll to Top