ಪಡುಬಿದ್ರಿ: ಕಡಲ್ಕೊರೆತಕ್ಕೆ ಬೀಚ್ ರಸ್ತೆ ಕುಸಿಯುವ ಭೀತಿ 

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಜು.29. ಕಡಲ್ಕೊರೆತ ಪರಿಣಾಮ ಬೀಚ್ ರಸ್ತೆ ಕುಸಿಯುವ ಭೀತಿ ಉಂಟಾಗಿದ್ದು, ಸ್ಥಳೀಯರು ಆತಂಕ ಪಡುವ ಪರಿಸ್ಥಿತಿ ಎದುರಾಗಿದೆ.ಕಡಲ್ಕೊರೆತ ಉಂಟಾಗುತ್ತಿರುವ ನಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಬಳಿ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂಫ್ಲ್ಯಾಗ್ ಬೀಚ್‌ಗೆ ತೆರಳುವ ಸಂಪರ್ಕ ರಸ್ತೆಯ ಅಡಿಭಾಗಕ್ಕೆ ಅಲೆಗಳು ಅಪ್ಪಳಿಸುತ್ತಿವೆ. ಹೀಗಾಗಿ ರಸ್ತೆ ಕುಸಿಯುವ ಭೀತಿ ಎದುರಾಗಿದೆ.

ರಸ್ತೆ ಕುಸಿಯುವ ಸಾಧ್ಯತೆ ಇರುವ ಹಿನ್ನೆಲೆ ಬೀಚ್‌ಗೆ ತೆರಳುವ ರಸ್ತೆಯನ್ನು ಬ್ಯಾರಿಕೇಡ್ ಇಟ್ಟು ಪ್ರವಾಸಿಗರು ಹೋಗದಂತೆ ನಿರ್ಬಂಧಿಸಲಾಗಿದೆ. ಜುಲೈ 31ವರೆಗೆ ಬ್ಲೂಫ್ಲ್ಯಾಗ್ ಬೀಚ್ ವೀಕ್ಷಣೆಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಬ್ಲೂಫ್ಲ್ಯಾಗ್ ಬೀಚ್‌ನ ಪ್ರಬಂಧಕ ವಿಜಯ ಶೆಟ್ಟಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

Also Read  ಮಾದಕ ವಸ್ತು ಸೇವನೆ - ಯುವಕರಿಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

 

 

error: Content is protected !!
Scroll to Top