ಉಪ್ಪಿನಂಗಡಿ: ಗುಡ್ಡ ಕುಸಿತ…!       ಸಂಚಾರ ಸಂಪೂರ್ಣ ಬಂದ್  

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜು.30. ಗುಡ್ಡ ಕುಸಿದ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆದ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಹೀಗಾಗಿ ಅಜಿಲಮೊಗರು – ಸರಳಿಕಟ್ಟೆ – ಉಪ್ಪಿನಂಗಡಿ ಸಂಪರ್ಕ ಕಡಿತಗೊಂಡಿದೆ ಎನ್ನಲಾಗಿದೆ.

ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ. ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ. ಗುಡ್ಡ ಕುಸಿತದಿಂದ ವಿದ್ಯುತ್ ಕಂಬಗಳು ಧರೆಗುರುಳಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎಂದು ವರದಿ ತಿಳಿಸಿದೆ. ಉಪ್ಪಿನಂಗಡಿ, ಪುತ್ತೂರು, ಬಿ.ಸಿರೋಡು ತೆರಳುವ ಪ್ರಯಾಣಿಕರು ಬದಲಿ ರಸ್ತೆ ಬಳಸುವಂತೆ ಸೂಚಿಸಲಾಗಿದೆ.

Also Read  ಟಿಕೆಟ್ 'ಕೈ' ತಪ್ಪಿದ ಬೇಸರವಿದೆ.!  ➤ ಆದರೆ ಪಕ್ಷಕ್ಕೆ ಯಾವತ್ತಿಗೂ ದ್ರೋಹ ಬಗೆಯಲ್ಲ

error: Content is protected !!
Scroll to Top