ಭಾರೀ ಮಳೆಯಿಂದ ಹಂಪಿಯಲ್ಲಿ ಕನಿಷ್ಠ 12 ಸ್ಮಾರಕಗಳು ಮುಳುಗಡೆ…!

(ನ್ಯೂಸ್ ಕಡಬ)newskadaba.com ಹೊಸಪೇಟೆ, ಜು.31. ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ ಗೂ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ.


ಭಾರೀ ಮಳೆಯಿಂದ ಒಳ ಹರಿವು ಹೆಚ್ಚಿರುವ ಕಾರಣ ತುಂಗಭದ್ರಾ ಅಣೆಕಟ್ಟೆಯಿಂದ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡುವಾಗ ನದಿಯ ಸಮೀಪ ಎಲ್ಲೆಂದರಲ್ಲಿ ಪ್ರಯಾಣಿಸದಂತೆ ವಿಜಯನಗರ ಆಡಳಿತ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದೆ.
ತುಂಗಭದ್ರಾ ನದಿಯ ಜಲಾನಯನ ಪ್ರದೇಶಗಳಲ್ಲಿ ಕಳೆದ 20 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಂಪಿಯ ಪುರಂದರ ಮಂಟಪ, ಚಕ್ರತೀರ್ಥ, ಕೋದಂಡರಾಮ ದೇವಸ್ಥಾನ, ಹನುಮ ದೇವಸ್ಥಾನ ಸೇರಿದಂತೆ 12 ಸ್ಮಾರಕಗಳು ಮುಳುಗಡೆಯಾಗಿವೆ.

error: Content is protected !!

Join the Group

Join WhatsApp Group