ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.01. ಮಳೆಯ ಆರ್ಭಟ ಮುಂದುವರಿದಿದ್ದು, ನೆರೆಯಿಂದ ಆವೃತವಾದ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು ಎನ್ನಲಾಗಿದೆ.
ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಬಂಟ್ವಾಳ, ಆಲಡ್ಕ, ಉಪ್ಪಿನಂಗಡಿ ಮತ್ತಿತರ ಕಡೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ನೆರೆ ಪರಿಸ್ಥಿತಿ ವೀಕ್ಷಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ಬಂಟ್ವಾಳ ತಹಶೀಲ್ದಾರ್ ಅಚ೯ನಾ ಭಟ್ ಮತ್ತಿತರರು ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು ಎಂದು ವರದಿ ತಿಳಿಸಿದೆ.

error: Content is protected !!
Scroll to Top