(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.01. ಕೇಂದ್ರ ಹಣಕಾಸು ಸಚಿವಾಲಯವು ಇತ್ತೀಚೆಗಷ್ಟೇ ಬೆಂಗಳೂರು ನಮ್ಮ ಮೆಟ್ರೋದ 15,611 ಕೋಟಿ ರೂ.ವೆಚ್ಚದ 3ನೇ ಹಂತದ ಯೋಜನೆಗೆ ಅನುಮತಿ ನೀಡಿದ್ದು, ಇದೀಗ ಸಂಪುಟದ ಅಂತಿಮ ಅನುಮೋದನೆಗಾಗಿ ಕಾಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಏಕಕಾಲದಲ್ಲಿ 44.65 ಕಿ.ಮೀ ಉದ್ದದ ಯೋಜನೆಗೆ ಟೆಂಡರ್ ಪ್ರಕ್ರಿಯೆಗೆ ಆರಂಭಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ಗೆ (ಬಿಎಂಆರ್‌ಸಿಎಲ್) ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಆದರೆ ಮುಂಬರುವ ಎಲ್ಲಾ ಮೆಟ್ರೋ ಯೋಜನೆಗಳಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಸೂಚಿಸಿರುವ ಹೊಸ ಪ್ರಸ್ತಾವನೆಯು ಅದನ್ನು ತಡೆಹಿಡಿಯುತ್ತಿದೆ ಎಂದು ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.