ಕರಾವಳಿಯಲ್ಲಿ ನಿಲ್ಲದ ವರುಣನ ಅಟ್ಟಹಾಸ..‼️* *🔥ನಾಳೆ (ಆ. 02) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಆಗಸ್ಟ್ 02ರ ಶುಕ್ರವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶಿಸಿದ್ದಾರೆ‌.

Also Read  ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ

 

error: Content is protected !!
Scroll to Top