ಪ್ರಜ್ವಲ್ ರೇವಣ್ಣ ಕೇಸ್; ‘ಅಶ್ಲೀಲ ವಿಡಿಯೋಗಳು ಅಸಲಿ’ ಎಫ್ಎಸ್ಎಲ್ ವರದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿ ಬಂದಿದೆ. ಈ ವಿಡಿಯೋಗಳು ಅಸಲಿ ಎಂದು ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗವಾಗಿದೆ ಎನ್ನಲಾಗಿದೆ.


ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದೀಗ ಬಂದಿರುವ ಎಫ್ಎಸ್ಎಲ್ ವರದಿ ಪ್ರಕಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವಿಡಿಯೋ ನಕಲಿ ಅಲ್ಲ ಅಸಲಿ ಎಂದು ಬಹಿರಂಗವಾಗಿದೆ. ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್, ಮಾರ್ಫ್ ಮಾಡಿದ್ದಲ್ಲ. ಅವು ಅಸಲಿ ವಿಡಿಯೋಗಳು ಎಂದು ವರದಿಯಲ್ಲಿ ಸಾಬೀತಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ಬ್ರಹ್ಮಾವರ; ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು

error: Content is protected !!
Scroll to Top