ಅಂತಿಮ ಹಂತ ತಲುಪಿದ ಮಂಗಳೂರು- ಬೆಂಗಳೂರು ರೈಲು ಮಾರ್ಗದ ದುರಸ್ತಿ ಕಾರ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.05. ಬೆಂಗಳೂರು – ಮಂಗಳೂರು ರೈಲು ಮಾರ್ಗದ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಹಗಲ್‌ ನ ರೈಲು ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದ ದುರಸ್ತಿ ಕಾರ್ಯವು ಅಂತಿಮ ಹಂತ ತಲುಪಿದೆ. ಘಟನಾ ಸ್ಥಳದಲ್ಲಿ ರೈಲು ಇಂಜಿನ್ ನ ಪ್ರಾಯೋಗಿಕ ಸಂಚಾರ ಯಶಸ್ವಿ ಕಂಡಿದೆ.

ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದಾಗಿನಿಂದ ದುರಸ್ತಿ ಕಾರ್ಯಗಳನ್ನು ಆರಂಭಿಸಲಾಗಿದೆ. ಜುಲೈ 3ರಂದು ಭೂಕುಸಿತದ ಸ್ಥಳದಲ್ಲಿ ತಡೆಗೋಡೆ ಗೋಡೆ ಕಾಮಗಾರಿ ಸಂಪೂರ್ಣಗೊಂಡಿದ್ದು, ಅಂತಿಮ ಹಂತದ ಕಾಮಗಾರಿಗಳು ಭರದಿಂದ ಸಾಗುತ್ತಿದೆ. ಆದಷ್ಟು ಬೇಗನೆ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ.

Also Read  102 ನೆಕ್ಕಿಲಾಡಿ: ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ

 

 

error: Content is protected !!
Scroll to Top