ಮಂಗಳೂರು: ವೇಗದ ಮಿತಿ ನಿಗದಿಪಡಿಸಿದ ಎನ್ಎಚ್ಐ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಕರಾವಳಿ ಭಾಗದಲ್ಲಿ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭೂ ಕುಸಿತದಿಂದಾಗಿ ಹಾನಿಯಾಗಿರುವ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹೊಸದಾಗಿ ವೇಗದ ಮಿತಿ ನಿಗದಿಪಡಿಸಲಾಗಿದೆ ಎಂದು ತಿಳಿದುಬಂದಿದೆ.


ಸುರತ್ಕಲ್ ಮತ್ತು ತೊಕ್ಕೊಟ್ಟು ನಡುವಿನ ರಾಷ್ಟ್ರೀಯ ಹೆದ್ದಾರಿ-66 ಮಾರ್ಗದಲ್ಲಿ ಹಾಗೂ ಬಿಸಿ ರೋಡ್ ಮತ್ತು ನಂತೂರು ನಡುವಿನ ರಾಷ್ಟ್ರೀಯ ಹೆದ್ದಾರಿ-73 ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಗಂಟೆಗೆ 40 ಕಿಮೀ ವೇಗದ ಮಿತಿಯನ್ನು ಹೇರಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚನೆ ನೀಡಿದೆ.

error: Content is protected !!
Scroll to Top