ಜೀವ ಭಯದಲ್ಲಿ ಭಾರತಕ್ಕೆ ಶೇಕ್ ಹಸೀನಾ ಪರಾರಿ ಬಾಂಗ್ಲಾದೇಶ ಸೇನೆ ವಶಕ್ಕೆ                           



(ನ್ಯೂಸ್ ಕಡಬ)newskadaba.com ಢಾಕಾ, ಆ.06. ನೆರೆಯ ಬಾಂಗ್ಲಾದೇಶದಲ್ಲಿನ ಹಿಂಸಾಚಾರ, ಪ್ರಕ್ಷುಬ್ಧತೆಗೆ ಬೆದರಿದ ಶೇಕ್ ಹಸೀನಾ ಜೀವ ಭಯದಲ್ಲಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಭಾರತಕ್ಕೆ ಪರಾರಿಯಾದ ನಂತರ ಸೇನೆಯು ಮಧ್ಯಂತರ ಸರ್ಕಾರವನ್ನು ಸ್ಥಾಪಿಸಲಿದೆ ಎಂದು ಅಲ್ಲಿನ ಸೇನಾ ಮುಖ್ಯಸ್ಥ ವಾಕರ್-ಉಜ್-ಝಮಾನ್ ಘೋಷಿಸಿದ್ದಾರೆ.





ರಾಜೀನಾಮೆಗೆ ಒತ್ತಡ ಹೆಚ್ಚಾದ ನಂತರ ಶೇಕ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ದೇಶದಿಂದ ಪರಾರಿಯಾಗಿದ್ದಾರೆ. ಢಾಕಾ ತೊರೆದ ನಂತರ ಅವರು ಸಿ -130 ಸೇನಾ ವಿಮಾನದಲ್ಲಿ ಗಾಜಿಯಾಬಾದ್‌ನ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದಾರೆ.






error: Content is protected !!
Scroll to Top