ಮುರಿದು ಬಿದ್ದ ಕಾಳಿ ನದಿ ಸೇತುವೆ ಕಾರವಾರ – ಗೋವಾ ಸಂಚಾರ ತಾತ್ಕಾಲಿಕ ಬಂದ್                    

(ನ್ಯೂಸ್ ಕಡಬ)newskadaba.com ಕಾರವಾರ, ಆ.07. ಕಾಳಿ ನದಿ ಸೇತುವೆಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆಯು ಕುಸಿದು ಬಿದ್ದಿದ್ದು, ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್ ಆಗಿದೆ ಎಂದು ವರದಿ ತಿಳಿಸಿದೆ.

40 ವರ್ಷದ ಹಿಂದೆ ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆಯು ಕುಸಿದು ಬಿದ್ದು, ತಮಿಳುನಾಡು ಮೂಲದ ಲಾರಿಯೊಂದು ನದಿಗೆ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗೋವಾದಿಂದ ಹುಬ್ಬಳ್ಳಿಗೆ ಇದೇ ಮಾರ್ಗವಾಗಿ ತೆರಳುತಿದ್ದ ಖಾಲಿ ಲಾರಿಯು ಸೇತುವೆಯಿಂದ ಕೆಳಗೆ ಬಿದ್ದಿದೆ. ಬಳಿಕ ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಕರಾವಳಿ ಕಾವಲು ಪಡೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಕರಾವಳಿ ಕಾವಲುಪಡೆ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಚಾಲಕನನ್ನು ರಕ್ಷಿಸಲಾಗಿದೆ.

Also Read  ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ನಿವಾಸದ ಮೇಲೆ ದಾಳಿ ➤ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲು

error: Content is protected !!
Scroll to Top