ಕೆಮ್ಮಾರ: ಬೈಕ್ ಗಳ ಮಧ್ಯೆ ಢಿಕ್ಕಿ ► ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.19. ಬೈಕ್ ಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರದಲ್ಲಿ ಸೋಮವಾರ ಸಂಜೆ ನಡೆದಿದೆ.

ಉಪ್ಪಿನಂಗಡಿಯಿಂದ ಕಡಬ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಢಿಕ್ಕಿ ಉಂಟಾದ‌ ಪರಿಣಾಮ ಸವಾರರಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಬಗ್ಗೆಗಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

error: Content is protected !!
Scroll to Top