‘ಪಿಎಂ ಕುಸುಮ್ ಯೋಜನೆ’ ಕರ್ನಾಟಕದಿಂದಲೇ 1.79 ಲಕ್ಷ ರೈತರ ಬೇಡಿಕೆ               

(ನ್ಯೂಸ್ ಕಡಬ)newskadaba.com ನವದೆಹಲಿ, ಆ.08. ಪಿಎಂ ಕುಸುಮ್ ಯೋಜನೆಯಡಿ ಸೋಲಾರ್ ಪಂಪ್‌ಸೆಟ್‌ ಅಳವಡಿಕೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರು ಬೇಡಿಕೆ ಇಟ್ಟಿದ್ದಾರೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದ್ದಾರೆ.ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಜೋಶಿ,, ಕರ್ನಾಟಕದಿಂದ ಬರೋಬ್ಬರಿ 1,79,588 ಸೋಲಾರ್ ಪಂಪ್‌ ಅಳವಡಿಕೆಗೆ ಬೇಡಿಕೆ ಬಂದಿದೆ ಎಂದು ಮಾಹಿತಿ ನೀಡಿದರು.

ವಿಪಕ್ಷದವರು ಪಿಎಂ ಕುಸುಮ್ ಯೋಜನೆ ಬಗ್ಗೆ ಇಲ್ಲ-ಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಹಾಗೊಂದು ವೇಳೆ ಈ ಯೋಜನೆ ವಿಫಲವಾಗಿದ್ದರೆ ಪ್ರಸ್ತುತ ಕಾಂಗ್ರೆಸ್ ಆಡಳಿತದಲ್ಲಿರುವ ಕರ್ನಾಟಕ ಸರ್ಕಾರದವರು ಏಕೆ ಅಧಿಕೃತವಾಗಿ ನಮಗೆ ಇಷ್ಟೊಂದು ಬೇಡಿಕೆ ಕಳುಹಿಸುತ್ತಿದ್ದರು? ಎಂದು ಸಚಿವರು ಪ್ರಶ್ನಿಸಿದ್ದಾರೆ.

Also Read  ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣ - ಉಡುಪಿಗೆ ಸಿಐಡಿ ತಂಡ ಭೇಟಿ

 

error: Content is protected !!
Scroll to Top