ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಬಿಜೆಪಿ ಆಗ್ರಹ..!     ರಾಜ್ಯಪಾಲರ ಮೇಲೆ ‘ಕೈ’ ಪಡೆ ವಿಶ್ವಾಸ



(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 13. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಚಾರವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲು ಮಾಡಲು ಅನುಮತಿ ನೀಡುತ್ತಾರಾ, ಇಲ್ಲವೇ? ಎಂಬುವುದು ಇನ್ನೂ ಸ್ಪಷ್ಟಗೊಂಡಿಲ್ಲ ಎನ್ನಲಾಗಿದೆ.





ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ದಾಖಲೆಗಳನ್ನು ನೀಡಿ, ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು ಮತ್ತು ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದರು ಎಂದು ವರದಿಯಾಗಿದೆ.






 

error: Content is protected !!
Scroll to Top