ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 13. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ  ಪ್ರವರ್ಗ -1, ಎಸ್.ಸಿ, ಎಸ್.ಟಿ ರೂ. 2.50 ಲಕ್ಷ ಮೀರಿರಬಾರದು. ಪ್ರವರ್ಗ -2ಎ, 2ಬಿ, 3ಎ, 3ಬಿ, ಗಳಲ್ಲಿ ರೂ. 1 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ವೆಬ್‍ಸೈಟ್  https://shp.karnataka.gov.in ಮೂಲಕ ಆನ್‍ಲೈನ್ ನಲ್ಲಿ ಸೆಪ್ಟೆಂಬರ್ 4 ರೊಳಗೆ ಅರ್ಜಿ ಸಲ್ಲಿಸಬೇಕು. ತಾಲೂಕು ವಾರ್ಡ್ ವಿದ್ಯಾರ್ಥಿಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ಪರೀಕ್ಷಿಸಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಅಥವಾ ಹೆಚ್ಚಿನ ಮಾಹಿತಿಗೆ ಇಮೇಲ್ ವಿಳಾಸ: bcwdhelpline@gmail.com ಮೂಲಕ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 8050770004, 8050770005 ಸಂಪರ್ಕಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group