ಸೈಬರ್ ಕ್ರೈಮ್- ಮಂಗಳೂರು: ಒಂದೇ ವರ್ಷದಲ್ಲಿ 11 ಕೋಟಿ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16. ಕಳೆದ ಒಂದು ವರ್ಷದಲ್ಲಿ ನಡೆದ ಸೈಬರ್ ವಂಚನೆ ಪ್ರಕರಣಗಳ ಪೈಕಿ ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿಯೇ ವಂಚನೆಗೊಳಗಾದ ಸಂತ್ರಸ್ತರು ಸುಮಾರು 11 ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದಾರೆ. ಇಂತಹ ವಂಚನೆಗಳ ಬಗ್ಗೆ ಜನ ಜಾಗೃತರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು. ಅವರು ಗುರುವಾರದಂದು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಆಯೋಜಿಸಲಾಗಿದ್ದ ಸೈಬರ್ ಅಪರಾಧವನ್ನು ತಡೆಯುವ ಕುರಿತ ಜಾಗೃತಿ ಜಾಥಾ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದರು.

 

ಇದೇ ಸಂದರ್ಭ ನಗರ ಪೊಲೀಸ್ ಕಮಿಷನರ್‌ ಅನುಪಮ್ ಅಗರ್ವಾಲ್‌ ಮಾತನಾಡಿ, ‘ನಕಲಿ ಚಹರೆ, ನಕಲಿ ಧ್ವನಿ ಬಳಸಿ ಆನ್‌ಲೈನ್‌ ವಂಚನೆ ನಡೆಸಲಾಗುತ್ತಿದೆ. ಸೈಬರ್ ಅಪರಾಧ ಪ್ರಕರಣಗಳನ್ನು ಭೇದಿಸುವುದು ದೊಡ್ಡ ಸವಾಲು. ಶೇ. 20ರಷ್ಟನ್ನು ಮಾತ್ರ ಭೇದಿಸಲು ಸಾಧ್ಯವಾಗುತ್ತಿದೆ. ಜನ ಇಂತಹ ಮೋಸದ ಜಾಲಕ್ಕೆ ಬಲಿಯಾಗದಂತೆ ಎಚ್ಚರಿಕೆ ‌ವಹಿಸಬೇಕು ಎಂದರು. ಕರಾವಳಿ ರಕ್ಷಣಾ ಪಡೆಯ ಡಿಐಜಿ ಪಿ.ಕೆ. ಮಿಶ್ರಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಓಷನ್ ಪರ್ಲ್ ಉಪಾಧ್ಯಕ್ಷ ಬಿ.ಎನ್. ಗಿರೀಶ್, ರೋಹನ್ ಕಾರ್ಪೊರೇಷನ್‍ನ ಮಾಲೀಕ ರೋಹನ್ ಮೊಂತೇರೊ, ವಿಧಿವಿಜ್ಞಾನ ತಜ್ಞ ಡಾ.ಮಹಾಬಲ ಶೆಟ್ಟಿ, ಸೈಬರ್ ತಜ್ಞ ಅನಂತ ಪ್ರಭು, ಎನ್‍ಐಟಿಕೆ ಕಂಪ್ಯೂಟರ್ ವಿಭಾಗದ ಸಹ ಪ್ರಾಧ್ಯಾಪಕ ತೈಲಿಯಾನಿ, ಕಣಚೂರು ಶಿಕ್ಷಣ ಸಂಸ್ಥೆಯ ಅಬ್ದುಲ್ ರೆಹಮಾನ್, ಯುನಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಹಬೀಬ್ ರೆಹಮಾನ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಉಮೇಶ್ ಭಾಗವಹಿಸಿದ್ದರು.

error: Content is protected !!

Join the Group

Join WhatsApp Group