ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಶಿಕ್ಷಕ ಕಿಟ್ಟಣ್ಣ ರೈ ಅವರಿಗೆ ಬೀಳ್ಕೊಡುಗೆ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಆ. 17. ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯಲ್ಲಿ 23 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ನಿವೃತ್ತರಾದ ಶ್ರೀ ಕಿಟ್ಟಣ್ಣ ರೈ ಅವರಿಗೆ ಸಂಸ್ಥೆ ವತಿಯಿಂದ ವಿದಾಯ ಸಮಾರಂಭವು ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಗ್ರೇಸಿ ಪಿಂಟೋ ಮಾತನಾಡಿ, “ಶ್ರೀಯುತ ಕಿಟ್ಟಣ್ಣ ರೈ ಅವರು ತಮ್ಮ ಸೃಜನಶೀಲ ವ್ಯಕ್ತಿತ್ವ, ಭಾಷಾ ಹಾಗೂ ವಿಷಯ ಪಾಂಡಿತ್ಯ, ಬೋಧನಾ ಶೈಲಿ, ಕರ್ತವ್ಯ ನಿಷ್ಠೆ ಹಾಗೂ ವಿದ್ಯಾರ್ಥಿಗಳ ಕುರಿತ ಕಾಳಜಿಯಿಂದಾಗಿ ಶ್ರೇಷ್ಠ ಶಿಕ್ಷಕರ ಸಾಲಿನಲ್ಲಿ ಕಾಣಿಸಿಕೊಳ್ಳುವ ವ್ಯಕ್ತಿಯಾಗಿದ್ದಾರೆ” ಎಂದು ಅವರ ಸೇವೆಯನ್ನು ಶ್ಲಾಾಘಿಸಿದರು .

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ.ಪ್ರಕಾಶ್ ಪಾವ್ಲ್ ಡಿಸೋಜಾ ರವರು ಮಾತನಾಡಿ, “ನಮ್ಮ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಶ್ರೀಯುತ ಕಿಟ್ಟಣ್ಣ ರೈ ಯವರು ಎಲ್ಲಾ ಶಿಕ್ಷಕರಿಗೂ ಮಾದರಿಯೆನಿಸಿದ್ದಾರೆ” ಅವರ ಸೇವೆಗೆ ನಾವು ಕೃತಜ್ಞರಾಗಿದ್ದೇವೆ ಎಂದರು.

Also Read  ಮಿತ್ತಬೈಲು: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ

ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀ ಕಿಟ್ಟಣ್ಣ ರೈ ಅವರು” ಶಿಕ್ಷಕ ವೃತ್ತಿಯಿಂದ ನಿವೃತ್ತನಾದರೂ, ಪ್ರವೃತ್ತಿಯಿಂದ ಸದಾ ಶಿಕ್ಷಕನಾಗಿ ಉಳಿಯಲು ಬಯಸುತ್ತೇನೆ ಎಂದರು. ವೃತ್ತಿ ಜೀವನದಲ್ಲಿನ ಮೆಲುಕುಗಳೊಂದಿಗೆ ತಮಗೆ ಸಹಕರಿಸಿದ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿಗೆ ಅವರು ಧನ್ಯವಾದ ಸಲ್ಲಿಸಿದರು. ಸೈಂಟ್ ಜೋಕಿಮ್ಸ್ ಪ್ರೌಢ ಶಾಲೆಯ ರಕ್ಷಕ- ಶಿಕ್ಷಕ ಸಮಿತಿಯ ಉಪಾಧ್ಯಕ್ಷರಾದ ಶ್ರೀ ವಾಚಣ್ಣ ಕೆರೆಮೂಲೆ ಹಾಗೂ ವಿದ್ಯಾರ್ಥಿನಿ ಅನುಶ್ರೀ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲರಾದ ವಂ‌.ಅಮಿತ್ ಪ್ರಕಾಶ್ ರೋಡ್ರಿಗಸ್ ಅವರು ಸನ್ಮಾನ ಪತ್ರ ವಾಚನ ಮಾಡಿದರು. ಕಾರ್ಯಕ್ರಮದಲ್ಲಿ ಸೈಂಟ್ ಜೋಕಿಮ್ಸ್ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷರಾದ ಡೆನ್ನಿಸ್ ಫೆರ್ನಾಂಡಿಸ್, ಕಾರ್ಯದರ್ಶಿಯಾದ ಶ್ರೀಮತಿ ಜೆಸಿಂತಾ ವೇಗಸ್, ವಿದ್ಯಾಸಂಸ್ಥೆಗಳ ಮುಖ್ಯಸ್ಥರುಗಳಾದ ಶ್ರೀ ಕಿರಣ್ ಕುಮಾರ್, ಸಿಸ್ಟರ್ ಹಿಲ್ಡಾ ರೋಡ್ರಿಗಸ್, ಶ್ರೀಮತಿ ದಕ್ಷಾ ಪ್ರಸಾದ್ ಉಪಸ್ಥಿತರಿದ್ದರು. ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ರೀಲತಾ ಕೆ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಪಿ ವಂದಿಸಿದರು. ಉಪನ್ಯಾಸಕ ರಾಜೇಶ್ ಎನ್ ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top