ಏಣಿತ್ತಡ್ಕ: ಕುಮಾರಧಾರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ► ಟಿಪ್ಪರ್, ಪಿಕಪ್, 3 ದೋಣಿಗಳು ಸೇರಿದಂತೆ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ.21. ಅಕ್ರಮ ಮರಳು ಅಡ್ಡೆಗೆ ದಾಳಿ‌ ನಡೆಸಿರುವ ಮೂರು ನಾಡದೋಣಿ, ಒಂದು ಟಿಪ್ಪರ್, ಒಂದು ಪಿಕಪ್ ವಾಹನ ಹಾಗೂ ಮರಳು ತೆಗೆಯಲು ಉಪಯೋಗಿಸುತ್ತಿದ್ದ ಕೆಲವು ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಮೂವರನ್ನು ವಶಕ್ಕೆ ಪಡೆದುಕೊಂಡ ಘಟನೆ ಬುಧವಾರದಂದು ಕುಮಾರಧಾರಾ ನದಿಯ ಏಣಿತ್ತಡ್ಕ ಎಂಬಲ್ಲಿ ನಡೆದಿದೆ.

ಕಡಬ ತಾಲೂಕಿನ ಕೊಯಿಲ ಗ್ರಾಮದ ಏಣಿತಡ್ಕ ಎಂಬಲ್ಲಿ ಕುಮಾರಧಾರ ನದಿಯ ಅಂಚಿನಲ್ಲಿ ಯತೀಶ್ ಗೌಡ ಎಂಬವರಿಗೆ ಸೇರಿದ ರ್ಯಾಂಪ್ ನಲ್ಲಿ ಅಕ್ರಮವಾಗಿ ಮರಳು ತೆಗೆಯುತಿದ್ದ
ಖಚಿತ ವರ್ತಮಾನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ಬಿ.ಆರ್. ರವಿಕಾಂತೇಗೌಡರವರ ಮಾರ್ಗದರ್ಶನದಲ್ಲಿ ಡಿಸಿಐಬಿ ಪೊಲೀಸ್ ನಿರೀಕ್ಷಕರಾದ ಸುನಿಲ್. ವೈ ನಾಯ್ಕ್ ಹಾಗೂ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಗೋಪಾಲ್ ನಾಯ್ಕ್ ಮತ್ತು ಕಡಬ ಠಾಣಾ ಉಪ ನಿರೀಕ್ಷಕರಾದ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿಗಳು ದಾಳಿ‌ ನಡೆಸಿ ಆರೋಪಿಗಳಾದ ಅರುಣ್ (27), ಅಯ್ಯುಬ್ (37), ಅಬ್ದುಲ್ ಲತೀಫ್ (45) ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದು, ಮೂರು ನಾಡದೋಣಿ, ಒಂದು ಟಿಪ್ಪರ್, ಒಂದು ಪಿಕಪ್ ವಾಹನ ಹಾಗೂ ಮರಳು ತೆಗೆಯಲು ಉಪಯೋಗಿಸುತ್ತಿದ್ದ ಕೆಲವು ಸಾಮಾಗ್ರಿಗಳನ್ನು ಸ್ವಾಧೀನಪಡಿಸಿದ್ದಾರೆ. ಸ್ವಾಧೀನಪಡಿಸಿದ ವಸ್ತುಗಳ ಒಟ್ಟು ಮೌಲ್ಯ 12 ಲಕ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Also Read  ಬಲ್ಯ: ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ➤ಹೊರೆಕಾಣಿಕೆ ಸಮರ್ಪಣೆ

error: Content is protected !!
Scroll to Top