ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ವೈದ್ಯಕೀಯ ಸಂಘಟನೆಯಿಂದ ಮುಷ್ಕರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಕೋಲ್ಕತ್ತಾದ ಆರ್.ಜಿ.ಕರ್ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯೋರ್ವಳನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ನಗರದ ಭಾರತೀಯ ವೈದ್ಯಕೀಯ ಸಂಘ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ನಗರದ ಐಎಂಎ ಭವನದಿಂದ ಜಿಲ್ಲಾಧಿಕಾರಿ ಕಚೇರಿಗೆ ಶಾಂತಿಯುತ ಮೆರವಣಿಗೆ ನಡೆಯಿತು.

 

ಈ ಸಂದರ್ಭದಲ್ಲಿ ಬಿಜೆಪಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ ಸಹಿತ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಭಾಗವಹಿಸಿದ್ದರು. 24 ಗಂಟೆಗಳ ಕಾಲ ನಡೆಯುವ ಮುಷ್ಕರದ ವೇಳೆ ಹೊರರೋಗಿ ವಿಭಾಗ, ವೈದ್ಯಕೀಯ ಸೇವೆಗಳು, ರೋಗಿಗಳ ದಾಖಲಾತಿ ಸಹಿತ ಪ್ರಮುಖ ಸೇವೆಗಳು ಬಂದ್ ಆಗಿದೆ. ಎಲ್ಲಾ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳು, ಕ್ಲೀನಿಕ್ ಗಳು ಬಂದ್ ಆಗಿದೆ.

Scroll to Top