ಹ್ಯಾಂಡ್ ಬ್ರೇಕ್ ಹಾಕದೆ ಟಿಪ್ಪರ್ ಲಾರಿ ನಿಲ್ಲಿಸಿ ಹೋಗಿದ್ದ ಚಾಲಕ..!        ಮಗು ಸೇರಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತ್ಯು..!                

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ರಾಜಧಾನಿ ಬೆಂಗಳೂರಿನಲ್ಲಿ ವರಮಹಾಲಕ್ಷ್ಮಿ ಹಬ್ಬ ಕಳೆದು ಮರುದಿನ ಇಂದು ಬೆಳ್ಳಂಬೆಳಗ್ಗೆ ಭೀಕರ ದುರಂತ  ಘಟನೆ ನಡೆದಿದ್ದು, ಟಿಪ್ಪರ್ ಹರಿದು ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ಹೊಸ ಗುಡ್ಡದಹಳ್ಳಿಯಲ್ಲಿ ದುರ್ಘಟನೆ ನಡೆದಿದ್ದು, ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಹರಿದ ಪರಿಣಾಮ ಮಗು ಹಾಗೂ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

           

 

 

Scroll to Top