ಕಟಪಾಡಿ: ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಟ್ಯಾಂಕರ್ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ಕಾಪು, ಫೆ.22. ಬೈಕಿಗೆ ಟ್ಯಾಂಕರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿಯಲ್ಲಿ ನಡೆದಿದೆ.







ಮೃತ ಬೈಕ್ ಸವಾರನನ್ನು ಕಟಪಾಡಿ ನಿವಾಸಿ ಗುರುಪ್ರಸಾದ್(26) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ವಿದೇಶದಿಂದ ಆಗಮಿಸಿದ್ದ ಗುರುಪ್ರಸಾದ್ ತನ್ನ ಬೈಕಿನಲ್ಲಿ ಬುಧವಾರ ರಾತ್ರಿ ತೆರಳುತ್ತಿದ್ದಾಗ ಹಿಂದಿನಿಂದ ಅತೀ ವೇಗವಾಗಿ ಆಗಮಿಸಿದ ಟ್ಯಾಂಕರ್ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಘಟನೆಯಿಂದ ಸವಾರ ಗುರುಪ್ರಸಾದ್ ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top