ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರಿಯುವ ಎಲ್ಲಾ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಅವರು ಕಳೆದುಕೊಂಡಿದ್ದಾರೆ. ಅವರಿಗೆ ಕರ್ನಾಟಕದ ಜನತೆಯ ಹಾಗೂ ನಮ್ಮ ಸಂವಿಧಾನದ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ,  ಹುದ್ದೆಯ ಪಾವಿತ್ರ್ಯತೆಯನ್ನು ಗೌರವಿಸಿ ಅವರು ತಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ.

 

“ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಶನಿವಾರ ನೀಡಿದ ಅನುಮತಿಯಿಂದ ಜನ ವಿರೋಧಿ ಭ್ರಷ್ಟ ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಸತ್ಯಕ್ಕೆ ಜಯಸಿಗಲೇಬೇಕು ಎನ್ನುವುದು ಅರ್ಥವಾಗುತ್ತದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರದ ಪ್ರಕರಣ ಕೇವಲ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಚಾರದ ಪ್ರಕರಣವಾಗಿರದೇ, ದುರ್ಬಲ, ಬಡ ವರ್ಗದ ಜನರಿಗೆ ಎಸಗಿರುವ ವಂಚನೆಯಾಗಿದೆ. “ತಮ್ಮ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆಯೇ ಸಣ್ಣದೊಂದು ಕಪ್ಪು ಚುಕ್ಕಿ ಇಲ್ಲದಂತೆ  ರಾಜಕೀಯ ಪಾವಿತ್ಯತೆ ಕಾಪಾಡಿಕೊಂಡಿದ್ದೇನೆ ಎನ್ನುವ ಸಾರ್ವಜನಿಕವಾಗಿ ಸಾರುತ್ತಾ ಬಂದಿರುವ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಭ್ರಷ್ಟಚಾರ ಎಸಗುವ ಮೂಲಕ ರಾಜ್ಯದ ಜನತೆಗೆ ಮೋಸ ಮಾಡಿದ್ದಾರೆ” .

 

“ಒಂದೆಡೆ ಕಾಂಗ್ರೆಸ್ ರಾಜ್ಯದ ಬೊಕ್ಕಸವನ್ನೇ ಖಾಲಿ ಮಾಡಿದ್ದು, ಮತ್ತೊಂದೆಡೆ ಬಡವರ ಹಕ್ಕುಗಳನ್ನು ನಿರ್ಲಕ್ಷಿಸಿ ತಮ್ಮ ಖಜಾನೆ ತುಂಬಿಸಿಕೊಂಡಿದೆ. ಇದು ಹಗಲು ದರೋಡೆಯಾಗಿದ್ದು, ಇನ್ನು ಮುಂದೆ  ಸಿದ್ದರಾಮಯ್ಯ ಸಿಎಂ ಹುದ್ದೆಯ ಪ್ರಭಾವ ಬೀರಿ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದ ಮೇಲೆ ಜನತೆಗಿರುವ ನಂಬಿಕೆ ಉಳಿಸಲು, ಸಿದ್ದರಾಮಯ್ಯ ಅವರು ಈ ಕೂಡಲೇ ಸಿಎಂ ಸ್ಥಾನ ತ್ಯಜಿಸುವ ಸಮಯ ಬಂದಿದ್ದು, ತಮ್ಮ ವಿರುದ್ದ ಕೇಳಿ ಬಂದಿರುವ ಎಲ್ಲಾ ಆರೋಪಗಳಿಗೆ ಜನತೆ ಮುಂದೆ ಉತ್ತರಿಸಲಿ” ಎಂದು ಸಂಸದರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

error: Content is protected !!

Join the Group

Join WhatsApp Group