ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.c0m ಚೆನ್ನೈ, ಆ. 19.  ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಕೇಶ್‌ ಪಾಲ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ರಾಕೇಶ್‌ ಪಾಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಚೆನ್ನೈಗೆ ಬಂದಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

Scroll to Top