ಪುತ್ತೂರು: ಕಾಡುಹಂದಿ ದಾಳಿ ದ್ವಿಚಕ್ರ ವಾಹನ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

 

 

ಗಾಯಗೊಂಡ ಸ್ಕೂಟರ್ ಸವಾರನನ್ನು ಕುಂಬ್ರ ಪೆಟ್ರೋಲ್ ಪಂಪ್ ಮ್ಯಾನೇಜರ್ ಆಗಿರುವ ಧನುಷ್ ಎಂದು ಗುರುತಿಸಲಾಗಿದೆ. ಧನುಷ್ಅವರು ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಕುಂಬ್ರ ಪೆಟ್ರೋಲ್ ಪಂಪ್ ಗೆ ಬರುತ್ತಿದ್ದ ವೇಳೆ ಕಾಡು ಹಂದಿಯೊಂದು ಏಕಾಏಕಿ ಧನುಷ್ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ದಾಳಿ ನಡೆಸಿದೆ. ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಧನುಷ್ ಅವರ ಮೇಲೆ ಎರಗಿದ ಹಂದಿಯು ಅವರ ಬಲ ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದಲ್ಲದೇ ದೇಹದ ಇತರ ಭಾಗಗಳಿಗೆ ಗಾಯಗೊಳಿಸಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Scroll to Top