(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 20. ತರಬೇತಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ತನ್ನ ಅಳಿಯನನ್ನು ಗಲ್ಲಿಗೇರಿಸಿ, ಬೇಕಾದದ್ದನ್ನು ಮಾಡಿ ಎಂದು ಆರೋಪಿ ವಿರುದ್ದ ಆತನ ಅತ್ತೆ ಕಿಡಿಕಾರಿರುವ ಕುರಿತು ವರದಿಯಾಗಿದೆ.
ಈ ಕುರಿತು ಆರೋಪಿ ಸಂಜಯ್ ರಾಯ್‍ನ ಅತ್ತೆ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಆರೋಪಿ ಸಂಜಯ್ ಒಬ್ಬನೇ ಈ ಕೃತ್ಯ ಎಸಗಿದಂತೆ ಕಾಣುತ್ತಿಲ್ಲ. ಅವನ ಜೊತೆ ಬೇರೆಯವರು ಇದ್ದಿರಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಆರೋಪಿ ಸಂಜಯ್ ನನ್ನ ಮಗಳ ಜೊತೆ ಮದುವೆಯಾದ ಆರಂಭದಲ್ಲಿ 6 ತಿಂಗಳು ಮಾತ್ರ ಚೆನ್ನಾಗಿದ್ದ. ಬಳಿಕ ಆಕೆಗೆ ಹಿಂಸೆ ನೀಡಿ ಥಳಿಸುತ್ತಿದ್ದ. ಇದರಿಂದ ಆಕೆ 3 ತಿಂಗಳ ಗರ್ಭಿಣಿಯಾಗಿದ್ದಾಗ ಆಕೆಗೆ ಗರ್ಭಪಾತವಾಗಿತ್ತು. ಈ ಬಗ್ಗೆ ದೂರು ಕೂಡ ದಾಖಲಿಸಲಾಗಿತ್ತು ಎಂದು ಹೇಳಿದ್ದಾರೆ. ಸಂಜಯ್ ಒಳ್ಳೆಯವನಲ್ಲ. ಅವನನ್ನು ಗಲ್ಲಿಗೇರಿಸಿ, ಅವನಿಗೆ ನೀವು ಬೇಕಾದುದನ್ನು ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.