’ವೈದ್ಯರ ಸುರಕ್ಷತೆಗಾಗಿ ಕಾನೂನು ಜಾರಿಗೆ ತನ್ನಿ’         ಪ್ರಧಾನಿ ಮೋದಿಗೆ ನಿಮ್ಹಾನ್ಸ್ ವೈದ್ಯರ ಪತ್ರ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ವೈದ್ಯರು ಹಾಗೂ ವೈದ್ಯಕೀಯ ವೃತ್ತಿಪರರ ರಕ್ಷಣೆಗೆ ತುರ್ತಾಗಿ ಕಾನೂನು ಜಾರಿಗೆ ತರಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನಿಮ್ಹಾನ್ಸ್‌ ನ ನಿವಾಸಿ ವೈದ್ಯರ ಸಂಘ (ಆರ್‌ಡಿಎ) ಸೋಮವಾರ ಬರೆದಿದೆ.

ಕೋಲ್ಕಾತ್ತಾದಲ್ಲಿ ವೈದ್ಯೆ ಮೇಲಿನ ಅತ್ಯಾಚಾರ ಹತ್ಯೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ದಿನದಂದು ನಡೆದ ಶಾಂತಿಯುಕ ಪ್ರತಿಭಟನೆ ವೇಳೆ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆದ ಘಟನೆ ಬೆನ್ನಲ್ಲೇ ವೈದ್ಯರ ಸಂಘ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಒತ್ತಾಯಿಸಿದೆ ಎಂದು ವರದಿ ತಿಳಿಸಿದೆ.

 

 

Scroll to Top