ಪುತ್ತೂರು: ನೇಣುಬಿಗಿದು ಯುವಕ ಆತ್ಮಹತ್ಯೆ…!

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಯ್ಯೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೆಯ್ಯೂರು ಉದ್ದೋಳೆ ನಿವಾಸಿ ಸಚಿನ್ ಎಂದು ಗುರುತಿಸಲಾಗಿದೆ. ಸಚಿನ್ ಫಿಲೋಮಿನಾ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸದ ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ, ಅಕ್ಕ, ಭಾವ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Scroll to Top