NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.  21. Department of School Education & Literacy ನವದೆಹಲಿರವರ ಮಾರ್ಗಸೂಚಿಯಂತೆ NMMS ಪರೀಕ್ಷೆಯನ್ನು 2024ನೇ ಡಿಸೆಂಬರ್ 8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಅನ್ ಲೈನ್ ಮೂಲಕ 2024ನೇ ಆಗಸ್ಟ್ 19ರಿಂದ ಅರ್ಜಿ ಆಹ್ವಾನಿಸಲಾಗಿದೆ

NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಸದರಿ ಪರೀಕ್ಷೆಯ ಆನ್‍ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ https://kseab.karnataka.gov.in/ ವೆಬ್‍ಸೈಟ್ ನಲ್ಲಿ ಲಭ್ಯಮಾಡಲಾಗಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್‍ಲೈನ್‍ನಲ್ಲಿ ಮಂಡಳಿಯ ವೆಬ್‍ಸೈಟ್‍ನಲ್ಲಿ ಲಭ್ಯವಿರುವ NMMS ಲಾಗಿನ್‍ನಲ್ಲಿ ಸಲ್ಲಿಸುವುದು. ಆನ್‍ಲೈನ್ ಅರ್ಜಿ ಸಲ್ಲಿಸಲು 2024ನೇ ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್‍ಸೈಟ್‍ನಲ್ಲಿ ಲಭ್ಯ ಮಾಡಲಾಗಿರುವ ಸುತ್ತೋಲೆಯನ್ನು ಗಮನಿಸುವುದು ಹಾಗೂ ಕೆ.ಎಸ್.ಕ್ಯು.ಎ.ಎ.ಸಿ ಕಛೇರಿಯ ಸ್ಥಿರ ದೂರವಾಣಿ ಸಂಖ್ಯೆ: 080-23341615 ಅನ್ನು ಕಛೇರಿ ಕೆಲಸದ ಅವಧಿಯಲ್ಲಿ ಸಂಪರ್ಕಿಸಬಹುದು.

Also Read  ಜಗದೀಶ್ ಕಾರಂತ ಶೀಘ್ರ ಬಿಡುಗಡೆಗೆ ಆಗ್ರಹ ► ಹಿಂಜಾವೇಯಿಂದ ರಾತ್ರಿ ಪುತ್ತೂರಿನಲ್ಲಿ ಪ್ರತಿಭಟನೆ

error: Content is protected !!
Scroll to Top