ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿ ಮೃತ್ಯು



(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಸ್ಟ್ ಕ್ಲಬ್‌ನಲ್ಲಿ ಸೋಮವಾರ ಸಂಜೆ ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಗೊಟ್ಟಿಗೆರೆಯ ಅಪಾರ್ಟ್‌ಮೆಂಟ್ ನಿವಾಸಿ ಖಾಸಗಿ ಕಂಪನಿ ಉದ್ಯೋಗಿ ದಯಾನಂದ ಎಂದು ಗುರುತಿಸಲಾಗಿದೆ.







ಸೋಮವಾರ ಸಂಜೆ ದಯಾನಂದ ಅದೇ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 10 ನಿಮಿಷ ಈಜಿದ ಬಳಿಕ ಕೊಳದಲ್ಲಿ ಪ್ರಜ್ಞೆ ತಪ್ಪಿದ್ದು, ಸ್ನೇಹಿತರು ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು ನಂತರ ಪತ್ನಿಗೆ ತಿಳಿಸಿದ್ದಾರೆ.






 

error: Content is protected !!
Scroll to Top