ಅಕ್ರಮ ಸಂಬಂಧ ಹಿನ್ನೆಲೆ ಪ್ರಕರಣ..!   ಆಟೋ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಆಟೋ ಚಾಲಕನ ಮೇಲೆ ಮೂವರು ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಹೊಂದಿದ್ದ ಆರೋಪದ ಮೇಲೆ 25 ವರ್ಷದ ಆಟೋ ಚಾಲಕನಿಗೆ ಮೂವರು ವ್ಯಕ್ತಿಗಳು ಚಾಕುವಿನಿಂದ ಇರಿದಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಯಂಡಹಳ್ಳಿ ಸ್ಲಂ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದವನನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಆರೋಪಿಗಳಾದ ಸೂರ್ಯ, ವಿನೋದ್ ಮತ್ತು ಸತೀಶಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

 

 

Scroll to Top