(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 26. ಸಿಪಿ ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಕೇಳುತ್ತೇವೆ. ಯಾವಾಗ ದೆಹಲಿಗೆ ಹೋಗುತ್ತೇವೆ ಎಂದು ಶೀಘ್ರದಲ್ಲೇ ತಿಳಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು, ಅಶ್ವತ್ಥ್ ನಾರಾಯಣ ಸಿ.ಪಿ.ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದೇವೆ. ಹಾಗೆ ಹೆಚ್. ಡಿ.ಕುಮಾರಸ್ವಾಮಿ ಅವರ ಜೊತೆ ಕೂಡ ಚರ್ಚೆ ಮಾಡಿದ್ದೇವೆ. ಸಿಪಿ ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡುತ್ತೇವೆ ಎಂದರು.