’ಲಡಾಖ್‌ ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಗೃಹ ಸಚಿವಾಲಯ ನಿರ್ಧಾರ’ ಗೃಹ ಸಚಿವ ಅಮಿತ್ ಶಾ ಹೇಳಿಕೆ         

(ನ್ಯೂಸ್ ಕಡಬ) newskadaba.c0m ಲಡಾಖ್, ಆ. 26.  ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಹೊಸ ಜಿಲ್ಲೆಗಳ ರಚನೆಯು ಪ್ರತಿಯೊಂದು ಮೂಲೆ ಮೂಲೆಯಲ್ಲೂ ಆಡಳಿತವನ್ನು ಹೆಚ್ಚಿಸುವ ಮೂಲಕ ಜನರಿಗೆ ಸಿಗುವ ಪ್ರಯೋಜನಗಳನ್ನು ಅವರ ಮನೆ ಬಾಗಿಲಿಗೆ ಕೊಂಡೊಯ್ಯುತ್ತದೆ ಎಂದು ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ಲಡಾಖ್ ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಈ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ

error: Content is protected !!
Scroll to Top