(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಭಾರತ ತಂಡದ ಕ್ರಿಕೆಟ್ ಆಟಗಾರರ ಪೈಕಿ ಇದೀಗ 2024 ರಲ್ಲಿ ನಿವೃತ್ತಿ ಘೋಷಿಸಿದ ಆಟಗಾರರ ಸಂಖ್ಯೆ 8ಕ್ಕೇರಿದೆ. ಈ ಎಂಟು ಆಟಗಾರರಲ್ಲಿ ಐವರು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದರೆ, ಮೂವರು ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ.
ಶಿಖರ್ ಧವನ್- ಟೀಮ್ ಇಂಡಿಯಾ ತಂಡದ ಎಡಗೈ ಆರಂಭಿಕ ಆಟಗಾರ ಶಿಖರ್ ಧವನ್ ಆಗಸ್ಟ್ 24 ರಂದು ಅಂತಾರಾಷ್ಟ್ರೀಯ ಹಾಗೂ ದೇಶಿ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದು, ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಅಪ್‌ಲೋಡ್ ಮಾಡಿರುವ ವಿಡಿಯೋದಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ
ಸೌರಭ್ ತಿವಾರಿ- ಎಡಗೈ ಪ್ಲೇಯರ್ ಸೌರಭ್ ತಿವಾರಿ ಭಾರತದ ಪರ 3 ಏಕದಿನ ಪಂದ್ಯಗಳನ್ನಾಡಿದ್ದು, ಇದೇ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 17 ವರ್ಷಗಳ ತಮ್ಮ ಕ್ರಿಕೆಟ್ ಕೆರಿಯರ್ಗೆ ಗುಡ್ ಬೈ ಹೇಳಿದ್ದಾರೆ.
ವರೋನ್ ಆರೋನ್- ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ವೇಗಿ ವರೋನ್ ಆರೋನ್ ಭಾರತದ ಪರ 9 ಏಕದಿನ ಮತ್ತು 9 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ.
ದಿನೇಶ್ ಕಾರ್ತಿಕ್- ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 2004 ರಲ್ಲಿ ಭಾರತದ ಪರ ಆಡಿ ಇಂಟರ್ ನ್ಯಾಷನಲ್ ಕೆರಿಯರ್ ಆರಂಭಿಸಿದ್ದ ಇವರು, ಮೂರು ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದು, ಜೊತೆಗೆ ಐಪಿಎಲ್ ಗೂ ಗುಡ್ ಬೈ ಹೇಳಿದ್ದಾರೆ.
ಕೇದಾರ್ ಜಾಧವ್- ಭಾರತದ ಪರ 73 ಏಕದಿನ ಪಂದ್ಯಗಳನ್ನಾಡಿರುವ ಸರದಾರ ಕೇದಾರ್ ಜಾಧವ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈ ಮೂಲಕ 10 ವರ್ಷಗಳ ತಮ್ಮ ಇಂಟರ್ನ್ಯಾಷನಲ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ.
ವಿರಾಟ್ ಕೊಹ್ಲಿ- ಟಿ20 ವಿಶ್ವಕಪ್ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಆದರೆ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ನಲ್ಲಿ ಮುಂದುವರೆಯಲಿದ್ದಾರೆ.
ರೋಹಿತ್ ಶರ್ಮಾ- ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸಹ ಟಿ20 ವಿಶ್ವಕಪ್ ಮುಕ್ತಾಯದ ನಂತರ ಇದೀಗ ಏಕದಿನ ಮತ್ತು ಟೆಸ್ಟ್ ತಂಡದಲ್ಲಿ ತೊಡಗಿಸಿಕೊಂಡಿರುವ ಹಿಟ್ಮ್ಯಾನ್ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಬಳಿಕ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳುವ ಸಾಧ್ಯತೆಯಿದೆ.
ರವೀಂದ್ರ ಜಡೇಜಾ- ಟೀಮ್ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಟಿ20 ವಿಶ್ವಕಪ್ ಬಳಿಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಆದರೆ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ನಲ್ಲಿ ಆಡಲಿದ್ದಾರೆ.