ಗೋಳಿತ್ತಡಿ: ಸ್ಕೂಟರ್ ಗೆ ಕಾರು‌ ಢಿಕ್ಕಿ ► ಸ್ಕೂಟರ್ ಸವಾರೆ ಗಂಭೀರ



(ನ್ಯೂಸ್ ಕಡಬ) newskadaba.com ಕಡಬ, ಫೆ.25. ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಎಂಬಲ್ಲಿ ಭಾನುವಾರದಂದು ನಡೆದಿದೆ.







ಗಾಯಾಳುವನ್ನು ಸ್ಕೂಟರ್ ಸವಾರೆ ಮಂಗಳೂರಿನ ಚಾನೆಲೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊಯಿಲ ಗ್ರಾಮದ ಕೊಲ್ಯ ನಿವಾಸಿ ಸೌಮ್ಯ ಎಂದು ಗುರುತಿಸಲಾಗಿದೆ. ಈಕೆ ತನ್ನ ಸ್ಕೂಟಿಯಲ್ಲಿ ಮುಖ್ಯ ರಸ್ತೆಗೆ ಬರುತ್ತಿದ್ದಾಗ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top