ಕುಸಿತಗೊಂಡ ಕೊಂತೂರು ಸರಕಾರಿ ಶಾಲೆಗೆ ಎಸ್‌ಡಿಎಂಸಿ ಜಿಲ್ಲಾ ಸಮನ್ವಯ ವೇದಿಕೆಯ ನಿಯೋಗ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ. 29. ತಾಲೂಕಿನ ಕುಂತೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಡಿಎಂಸಿ ಸಮನ್ವಯ ವೇದಿಕೆಯ ನಿಯೋಗವು ಭೇಟಿ ನೀಡಿ ಪರಿಶೀಲನೆ ನಡೆಸಿತು.


ಅಲ್ಲಿನ ಶಾಲಾಭಿವೃಧ್ದಿ ಸಮಿತಿ ಹಾಗೂ ಮುಖ್ಯಗುರುಗಳ ಜೊತೆ ಸಮಾಲೋಚನೆ ನಡೆಸಿ, ಘಟನೆ ನಡೆದ ಸ್ಥಳವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಎಸ್‌ಎಂ ಮಾತನಾಡಿ, ಶಾಲಾ ಕಟ್ಟಡ ಕುಸಿತದಿಂದ ಪೋಷಕರಲ್ಲಿ ಸರಕಾರಿ ಶಾಲೆಯ ಬಗ್ಗೆ ಆತಂಕ ನಿರ್ಮಾಣವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಕೂಡಲೇ ಕ್ರಮಕೈಗೊಳ್ಳಬೇಕು. ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಸರಕಾರವು ತುರ್ತಾಗಿ ಪರಿಹಾರ ಒದಗಿಸಿಕೊಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪ್ರವೀಣ್ ಆಚಾರ್ಯ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಕೆಮ್ಮಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ನಾಯ್ಕ ಪುತ್ತೂರು, ಜೊತೆ ಕಾರ್ಯದರ್ಶಿ ಕೃಷ್ಣಪ್ಪ ಮುಕ್ವೆ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಅಝೀಝ್ ಬಿ.ಕೆ ಕೆಮ್ಮಾರ, ಪೆರಾಬೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮಮತಾ ಕೆ ಶೆಟ್ಟಿ, ಫಯಾಜ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹರೀಶ್ ಬಾಣಬೆಟ್ಟು, ಮುಖ್ಯ ಗುರುಗಳಾದ ಶ್ರೀ ರಮೇಶ್ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group