ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ – ಸೆಲೆಬ್ರಿಟಿಗಳ ಭೇಟಿಗೆ ಅವಕಾಶ ನಿರಾಕರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 29. ಪರಪ್ಪನ ಅಗ್ರಹಾರದಲ್ಲಿನ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ನನ್ನು ಪೊಲೀಸ್‌ ಬಂದೋಬಸ್ತ್‌ ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದ್ದು, ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ.

ಕೈದಿಯ ಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ.

Scroll to Top