ಉದ್ದು ಮತ್ತು ಸೋಯಾಬಿನ್‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ   ಸಚಿವ ಪ್ರಹ್ಲಾದ್‌ ಜೋಶಿ                     

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 30.  ರಾಜ್ಯದಲ್ಲಿ ಉದ್ದು ಮತ್ತು ಸೋಯಾಬಿನ್‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ. ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈತರಿಗೊಂದು ಸಿಹಿ ಸುದ್ದಿ ಕೊಟ್ಟಿದೆ. ಕರ್ನಾಟಕದಲ್ಲಿ 2024-25 ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್ ಟನ್ ಉದ್ದು ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದು ವರದಿ ಪ್ರಕಟಣೆ ತಿಳಿಸಿದೆ.

 

 

error: Content is protected !!

Join the Group

Join WhatsApp Group