ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ- ಅರ್ಜಿ ವಜಾಗೊಳಿಸಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 30. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿಗಳಾದ ಶ್ರೀನಜವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ ಖಾಜಿ ಅವರಿದ್ದ ವಿಭಾಗೀಯ ಪೀಠ ಶುಕ್ರವಾರದಂದು ತೀರ್ಪು ನೀಡಿದೆ.


ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು ಸಂತೋಷ್ ರಾವ್ ನನ್ನು ಖುಲಾಸೆ ಗೊಳಿಸಿ ಕೆಳನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ‌.

ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸೌಜನ್ಯ ತಂದೆ ಚಂದಪ್ಪ ಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅದೇ ರೀತಿ ಪ್ರಕರಣದಲ್ಲಿ ನಿರಪರಾಧಿಯೆಂದು ಹೊರ ಬಂದ ಸಂತೋಷ್ ರಾವ್ ತನಗೆ ಪರಿಹಾರ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

Scroll to Top