ಪ್ಯಾರಾಲಿಂಪಿಕ್ಸ್- 10 ಮೀಟರ್ ಏರ್ ರೈಫಲ್ ನಲ್ಲಿ ಚಿನ್ನ ಗೆದ್ದ ಅವನಿ..!

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಆ. 30. ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಭಾರತದ ಅವನಿ ಲೆಖರಾ ಭಾಗವಹಿಸಿ ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ (SH1) ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.


ಈ ಮೂಲಕ ಸತತವಾಗಿ ಪ್ಯಾರಾಲಿಂಪಿಕ್ಸ್‌ ನಲ್ಲಿ ಚಿನ್ನದ ಪದಕಗಳನ್ನು ಗೆದ್ದ ಎರಡನೇ ಭಾರತೀಯ ಪ್ಯಾರಾ-ಅಥ್ಲೀಟ್ ಆಗಿ ಹೊರಹೊಮ್ಮಿದ್ದಾರೆ. ಅವನಿ ಲೇಖರಾ ಅವರು ಶುಕ್ರವಾರದಂದು 249.7 ನೊಂದಿಗೆ ಮೂರು ವರ್ಷಗಳ ಹಿಂದೆ ಸ್ಥಾಪಿಸಿದ್ದ 249.6 ರ ಪ್ಯಾರಾಲಿಂಪಿಕ್ಸ್ ದಾಖಲೆಯನ್ನು ಮುರಿದಿದ್ದಾರೆ.

error: Content is protected !!

Join the Group

Join WhatsApp Group