(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.27. ಬಿಗ್ ಬಾಸ್ ಕನ್ನಡದ ಸೀಸನ್ 5 ವಿನ್ನರ್ ಹಾಸನ ಮೂಲದ ಚಂದನ್ ಶೆಟ್ಟಿ ಮಂಗಳವಾರದಂದು ಸಂಜೆ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ನಡೆಯುತ್ತಿರುವ ಕಾಲೇಜು ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ಪುತ್ತೂರಿಗೆ ಆಗಮಿಸಲಿದ್ದಾರೆ.
ಸೈಂಟ್ ಫಿಲೋಮಿನಾ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಚಂದನ್ ಶೆಟ್ಟಿ ಇಂದು ಅದೇ ಕಾಲೇಜಿನಲ್ಲಿ ನಡೆಯುವ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಸಂಜೆ ಆರು ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಚಂದನ್ ಶೆಟ್ಟಿಯವರು ಹಿರಿಯ ವಿದ್ಯಾರ್ಥಿಯಾಗಿ ಕಾರ್ಯಕ್ರಮ ನೀಡಲಿದ್ದಾರೆ ಎಂದು ತಿಳಿದುಬಂದಿದೆ.