(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 02. ಪ್ರಭಾವ ಬಳಸಿ ಕೆಐಎಡಿಬಿಯಿಂದ (KIADB) ಸಿದ್ದಾರ್ಥ ಟ್ರಸ್ಟ್‌ಗೆ ಸಿಎ ನಿವೇಶನ ಪಡೆದಿದ್ದಾರೆಂಬ ಆರೋಪ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಳಿ ಬಂದಿದ್ದು, ಈ ಬಗ್ಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯುಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರಿನ ಏರೋಸ್ಪೇಸ್ ಪಾರ್ಕ್‌ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್‌ಗೆ ಮಂಜೂರು ಮಾಡಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಪತ್ರ ಬರೆದಿದ್ದು, ವಿವರ ನೀಡುವಂತೆ ಸೂಚನೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ದೂರು ನೀಡಿದ್ದರು. ನಾರಾಯಣಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಸರ್ಕಾರದಿಂದ ಹೆಚ್ಚಿನ ವಿವರಣೆ ನೀಡುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.