(ನ್ಯೂಸ್ ಕಡಬ) newskadaba.com ದುಬೈ, ಫೆ.27. ಶನಿವಾರ ತಡರಾತ್ರಿ ದುಬೈನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಭಾರತದ ಹಿರಿಯ ಬಹುಭಾಷಾ ನಟಿ ಶ್ರೀದೇವಿ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ.
ಹೃದಯ ಸ್ಥಂಬನದಿಂದಾಗಿ ಮೃತಪಟ್ಟಿದ್ದಾರೆ ಎಂದು ಮೊದಲು ಹೇಳಲಾಗಿತ್ತಾದರೂ, ಆ ನಂತರ ಬಾತ್ ಟಬ್ ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿತ್ತು. ಈ ನಡುವೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅನುಮಾನ ವ್ಯಕ್ತಪಡಿಸಿರುವ ದುಬೈ ಕಾನೂನು ತಜ್ಞರು ಮೃತದೇಹದ ಹಸ್ತಾಂತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಪುನಃ ಸಂಪೂರ್ಣ ಮರಣೋತ್ತರ ಪರೀಕ್ಷೆ ನಿರ್ಧರಿಸಲಾಗಿದ್ದು, ಶ್ರೀದೇವಿಯವರ ಪತಿ ಬೋನಿ ಕಪೂರ್ ರವರನ್ನು ತೀವ್ರ ತನಿಖೆಗೆ ಒಳಪಡಿಸಿದ್ದಾರೆ.