ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಯುವಕನೋರ್ವ ಮೃತಪಟ್ಟ ಘಟನೆ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ.

ಮೃತ ಯುವಕನನ್ನು ಮೂಡುಪೆರಾರ ಕಾಯರಾಣೆ ನಿವಾಸಿ ದಿ| ಆನಂದ ಪೂಜಾರಿ ಅವರ ಪುತ್ರ ಪ್ರದೀಪ್ ಪೂಜಾರಿ (31) ಎಂದು ಗುರುತಿಸಲಾಗಿದೆ. ಕ್ರಿಕೆಟ್ ಆಡುತ್ತಿದ್ದ ಸಂದರ್ಭ ಪ್ರದೀಪ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group