ಕಡಬ: ಕಾಲೇಜು ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಪ್ರಕರಣ ಆರೋಪಿಯ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 04. ಕಳೆದ ಮಾರ್ಚ್ ತಿಂಗಳಿನಲ್ಲಿ ಪರೀಕ್ಷೆಗೆಂದು ತೆರಳಿದ್ದ ಕಡಬ ಸರಕಾರಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಕೇರಳ ಮಲ್ಲಾಪುರದ ಅಬಿನ್ ಎಂಬಾತ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ.ಡಿ. ಅವರು ವಜಾಗೊಳಿಸಿದ್ದಾರೆ.

ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಅಭಿಯೋಜನೆಯ ಹಾಗೂ ಆರೋಪಿ ಪರ ವಾದ ಆಲಿಸಿ ಪ್ರಸ್ತುತ ವಿದ್ಯಾರ್ಥಿನಿಯರ ಪರಿಸ್ಥಿತಿಯನ್ನು ವೈದ್ಯಕೀಯ ಧೃಡಪತ್ರದ ಮೂಲಕ ತಿಳಿದುಕೊಂಡು ಈಗಲೂ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ಕಂಡು ಬಂದಿದೆ.‌ ಆದ್ದರಿಂದ ಆರೋಪಿಗೆ ಜಾಮೀನು ನೀಡಿದ್ದಲ್ಲಿ ಅವರಿಗೆ ತೊಂದರೆಯಾಗುವ ಸಾಧ್ಯತೆ ಇರುತ್ತದೆ ಎಂದು ಅಭಿಪ್ರಾಯಪಟ್ಟು ದೋಷಾರೋಪಣಾ ಪತ್ರದ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಅಭಿಯೋಜನೆಯ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಜಯಂತಿ. ಕೆ. ಭಟ್ ವಾದಿಸಿದ್ದರು.

Also Read  ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಮಹಿಳೆ ➤ ಆತ್ಮಹತ್ಯೆ ಶಂಕೆ

ಪ್ರೀತಿಸಿದ ಹುಡುಗಿ ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆ ಎಂಬ ಕಾರಣದಿಂದ ಕಡಬ ಸರಕಾರಿ ಕಾಲೇಜಿನ ಸಮವಸ್ತ್ರ ಧರಿಸಿ, ಕೊಯಮುತ್ತೂರಿನಿಂದ ಆ್ಯಸಿಡ್ ಖರೀದಿಸಿಕೊಂಡು ಬಂದು ಮಾ. 04ರಂದು ಪರೀಕ್ಷೆಗೆ ತೆರಳಿದ್ದ ವಿದ್ಯಾರ್ಥಿನಿಯ ಮೇಲೆ ಕೊಲೆ ಮಾಡುವ ಉದ್ದೇಶದಿಂದ ಆ್ಯಸಿಡ್ ದಾಳಿ ನಡೆಸಿದ್ದ. ಈ ವೇಳೆ ಇತರ ಇಬ್ಬರಹ ವಿದ್ಯಾರ್ಥಿನಿಯರಿಗೂ ಗಾಯವಾಗಿತ್ತು.

error: Content is protected !!
Scroll to Top