ಗೂನಡ್ಕ: ಬಸ್-ಕಾರು ನಡುವೆ ಅಪಘಾತ – ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಗೂನಡ್ಕ, ಸೆ. 05. ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಬುಧವಾರ ಮಧ್ಯರಾತ್ರಿ ಗೂನಡ್ಕದಲ್ಲಿ ನಡೆದಿದೆ.

ಮಡಿಕೇರಿಯಿಂದ ಬರುತ್ತಿದ್ದ ಓಮ್ನಿ ಕಾರು ಕಾಸರಗೋಡಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group